ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ವಶಕ್ಕೆ
ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಬಂಟ್ವಾಳ ಪೊಲೀಸರು 810 ಗ್ರಾಂ ಗಾಂಜಾ ಸ್ವಾಧೀನಪಡಿಸಿಕೊಂಡ ಘಟನೆ ಡಿ.13ರಂದು ಸಂಜೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಹನಮನಗರ ಎಂಬಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಅಕ್ರಮವಾಗಿ ವಶದಲ್ಲಿಟ್ಟುಕೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ ಐ ಮಂಜುನಾಥ ಟಿ.ರವರು, ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಜಾಗದಲ್ಲಿ ಅನುಮಾನಾಸ್ಪದವಾಗಿ ಇಬ್ಬರು ವ್ಯಕ್ಕಿಗಳು ನಿಂತಿದ್ದು ಅವರನ್ನು ವಿಚಾರಿಸಿದಾಗ ಒಬ್ಬಾತ ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಹಾಗೂ ಮತ್ತೋರ್ವ ಬಂಟ್ವಾಳ ಗೂಡಿನಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಎಂದು ತಿಳಿದು ಬಂದಿದೆ.
ಕಾರಿನಲ್ಲಿ 450 ಗ್ರಾಂ. ಗಾಂಜಾ ಹಾಗೂ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿದೆ.
ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ವಾಹನಗಳನ್ನು ಹಾಗೂ 810 ಗ್ರಾಂ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸ್ವಾಧೀನಪಡಿಸಲಾಗಿದ್ದು, ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ ಕ್ರ : 183/2025, ಕಲಂ: 8(C), 20(B) ii (a) NDPS Act ಅಡಿಯಲ್ಲಿ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.





