ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಆರೋಪಿ ವಶಕ್ಕೆ
ಮಂಗಳೂರು: ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಮ್ ನಲ್ಲಿ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜಿಪಮುನ್ನೂರು ಗ್ರಾಮದ ನಿವಾಸಿ ಅಬ್ದುಲ್ ಖಾದರ್ ನೇಹಾದ್ (27) ಬಂಧಿತ ಆರೋಪಿ.
ಆರೋಪಿಯು 2025 ಅ.11ರಂದು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್ ನ sdpi_2025ಐಡಿಯಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣದಲ್ಲಿ ತಾಂತ್ರಿಕ ವಿಧಾನದ ಮೂಲಕ ತನಿಖೆ ನಡೆಸಿದಾಗ ಆರೋಪಿತ ವ್ಯಕ್ತಿ ಸೌದಿ ಅರೇಬಿಯಾದಲ್ಲಿರುವ ವಿಚಾರ ಬೆಳಕಿಗೆ ಬಂತು.
ಬಳಿಕ ಆರೋಪಿಯ ವಿರುದ್ದ ಎಲ್‌ಬಿಸಿ ಹೊರಡಿಸಲಾಗಿತ್ತು.
ರವಿವಾರ (ಡಿ.14) ಕೇರಳ ರಾಜ್ಯದ ಕೋಝಿಕ್ಕೋಡ್ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬಂದಿಳಿದ ಆರೋಪಿ ಅಬ್ದುಲ್ ಖಾದರ್ ನೇಹಾದ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



