ಬೆಳ್ತಂಗಡಿ: ಅಪ್ರಾಪ್ತ ಬಾಲಕರ ಮೇಲೆ ಜ್ಯುವೆಲ್ಲರ್ಸ್ ಸಿಬ್ಬಂದಿಯಿಂದ ಹಲ್ಲೆ ಆರೋಪ, ಪ್ರಕರಣ ದಾಖಲು
ಬೆಳ್ತಂಗಡಿ: ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು ಡಿ.15ರಂದು ಸಂಜೆ, ಅಪ್ರಾಪ್ತ ವಯಸ್ಸಿನ ತಮ್ಮ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ವ್ಯಾಪ್ತಿಯಲ್ಲಿರುವ ಒಂದು ಜುವೆಲ್ಲರಿಯ ಹಿಂಭಾಗದಲ್ಲಿ ಬಹಿರ್ದೆಸೆಗೆ ತೆರಳಿದ್ದ ವೇಳೆ, ಜುವೆಲ್ಲರಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬಾಲಕರು ವಿಡಿಯೋ ಮಾಡುತ್ತಿದ್ದಾರೆಂದು ಆರೋಪಿಸಿ ಮೂವರನ್ನೂ ತಡೆದು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ದೂರುದಾರರು ದೂರಿನಲ್ಲಿ ತಿಳಿಸಿದ್ದಾರೆ.
ಈ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಇದಕ್ಕೆ ಪ್ರತಿಯಾಗಿ, ಜುವೆಲ್ಲರಿಯ ಸಿಬ್ಬಂದಿ ಕೂಡ ಬಾಲಕರ ವಿರುದ್ಧ ಡಿ.17ರಂದು ಪ್ರತ್ಯೇಕ ದೂರರ್ಜಿ ಸಲ್ಲಿಸಿದ್ದು, ಈ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.



