ಉಪ್ಪಿನಂಗಡಿ: ಬಾಲಕಿಯ ಅತ್ಯಾಚಾರ, ಆರೋಪಿ ಪೊಲೀಸ್ ವಶಕ್ಕೆ
ಉಪ್ಪಿನಂಗಡಿ: ಜೇನು ಕೃಷಿ ಕಲಿಸುತ್ತೇನೆಂದು ಹೇಳಿ ಅಪ್ರಾಪ್ತೆಯನ್ನು ನಿರಂತರ ಲೈಂಗಿಕ ತೃಷೆಗೆ ಬಳಸಿಕೊಂಡ ವ್ಯಕ್ತಿಯ ವಿರುದ್ದ ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರ ವಶಕ್ಕೆ ಪಡೆದ ಘಟನೆ ವರದಿಯಾಗಿದೆ.

ಉಪ್ಪಿನಂಗಡಿಯ ಅಬ್ದುಲ್ ಗಪೂರ್ ಎಂಬಾತ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ. ಬೆಳಗಾವಿ ಮೂಲದ ಕುಟುಂಬ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಅಪ್ರಾಪ್ತ ಮಗಳಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ ಕಾರಣ ತನ್ನ ಮಗಳನ್ನು 2 ತಿಂಗಳಿಂದ ಆರೋಪಿಯ ಮನೆಯಲ್ಲಿ ಬಿಟ್ಟಿದ್ದರು.
ನೊಂದ ಬಾಲಕಿಯ ಹೆತ್ತವರು ಊರಿಗೆ ತೆರಳಿದ್ದವರು ಹಿಂತಿರುಗಿ ಬಂದಾಗ ಆರೋಪಿಯು ಬಾಲಕಿಯನ್ನು ನಿರಂತರವಾಗಿ ಅತ್ಯಾಚಾರ ಮಾಡಿರುವುದಾಗಿ ನೊಂದ ಬಾಲಕಿ ತಿಳಿಸಿರುತ್ತಾಳೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.




