ರಾಜ್ಯ

ಚಿತ್ರದುರ್ಗ: ಹೊತ್ತಿ ಉರಿದ ಬಸ್, ಹಲವರು ಸಜೀವ ದಹನ

ಚಿತ್ರದುರ್ಗ: ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, ಹಲವು ಮಂದಿ ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.24ರಂದು ತಡರಾತ್ರಿ ಸಂಭವಿಸಿದೆ.


ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು.
ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್ ಎರಡೂ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ.

ದುರಂತದಲ್ಲಿ ಹಲವು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!