ರಾಜಕೀಯರಾಜ್ಯ

ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ- ಆರ್. ಅಶೋಕ್ ಆರೋಪ

ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.


ವಿಧಾನಸಭಾ ಅಧಿವೇಶನದಲ್ಲೇ ಉತ್ತರ ಕರ್ನಾಟಕದ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಭಾಗದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಹೇಳಿದರು. ಸಿದ್ದರಾಮಯ್ಯ ಅವರು ಇದುವರೆಗೆ ದಾಖಲೆಯ 16 ರಾಜ್ಯ ಬಜೆಟ್‌ಗಳನ್ನು ಮಂಡಿಸಿದ್ದಾರೆ. ಆದರೂ ಉತ್ತರ ಕರ್ನಾಟಕ ಅಭಿವೃದ್ಧಿಯಾಗಿಲ್ಲ ಎಂದಾದರೆ ಅದು ಸಂಪೂರ್ಣವಾಗಿ ಅವರ ವೈಫಲ್ಯ. ಮುಂದಿನ ಬಜೆಟ್‌ನ್ನು ಮತ್ತೊಬ್ಬರಿಗೆ ಮಂಡಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!