ಕರಾವಳಿರಾಜ್ಯ

ದ.ಕ ಜಿಲ್ಲಾ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯಿಂದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಮನವಿ

ಮಕ್ಕಳ ಹಕ್ಕುಗಳ ಮಾಸೋತ್ಸವ ಸಮೀತಿಯಿಂದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಯವರಲ್ಲಿ ಮಕ್ಕಳ ಹಕ್ಕುಗಳ ಮಾಸೋತ್ಸವದ ನಿರ್ಣಯಗಳ ಅನುಷ್ಕಾನಕ್ಕಾಗಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮೀತಿ ದ. ಕ ಜಿಲ್ಲೆ ಇದರ ಮೂಲಕ ಡಿ.31ರಂದು ಮನವಿ ನೀಡಲಾಯಿತು.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 22 ವರ್ಷಗಳಿಂದ ಸಮುದಾಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು  ಮಕ್ಕಳ ಹಕ್ಕುಗಳು ಮತ್ತು ಕಾನೂನುಗಳಿಗೆ ಸಂಬಂದಿಸಿದಂತೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ, 2025ನೇ ಸಾಲಿನ ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮವು ನವಂಬರ್ ಮತ್ತು ಡಿಸಂಬರ್ ಈ 2 ತಿಂಗಳ ಅವಧಿಯಲ್ಲಿ  ಸ್ವಯಂಸೇವಾ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಸರಕಾರಿ ಇಲಾಖೆಗಳು ಮತ್ತು ಸಮುದಾಯದ ಸಹಭಾಗಿತ್ವದಲ್ಲಿ ಜನಾಂದೋಲನವಾಗಿ ನಡೆಸಿಕೊಂಡು ಬರುತ್ತಿದೆ. ಈ ಸಂದರ್ಭದಲ್ಲಿ ಮಕ್ಕಳು ತನ್ನ ರಕ್ಷಣೆ,ಪೋಷಣೆ,ಶಿಕ್ಷಣವನ್ನು ಪಡೆಯುವಲ್ಲಿ  ಎದುರಿಸುತಿರುವ ನಾನಾ ರೀತಿಯ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು ಮಗುಸ್ನೇಹಿಯಾಗಿ ಕಾರ್ಯರೂಪಕ್ಕೆ ತರುವಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮುಂದೆ ತರುವ ಪ್ರಯತ್ನವನ್ನು ಪ್ರತಿ ವರ್ಷವೂ ಮಾಡಲಾಗುತ್ತಿದೆ.
ಇದರ ಪರಿಣಾಮವಾಗಿ ಕೆಲವೊಂದು ಬೇಡಿಕೆಗಳು ಈಗಾಗಲೇ ಕಾರ್ಯರೂಪಕ್ಕೆ ಬಂದಿದ್ದು   ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಇವರಲ್ಲಿ ಮಕ್ಕಳ ಹಕ್ಕುಗಳ ನಿರ್ಣಯಗಳನ್ನು  ಅನುಷ್ಟಾನ  ಮಾಡುವರೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಮಕ್ಕಳ ಮಾಸೋತ್ಸವ ಸಮಿತಿ ಜಿಲ್ಲಾ ಸಂಚಾಲಕರಾದ ಮೊಹಮ್ಮದ್ ರಫೀಕ್ ದರ್ಬೆ, ಪಡಿ ಸಂಸ್ಥೆಯ ವ್ಯವಸ್ಥಾಪಕರಾದ ರೆನ್ನಿ ಡಿಸೋಜ, ದ. ಕ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷೆ ಕಮಲ ಗೌಡ, ಪಡಿ ಸಂಸ್ಥೆಯ ಸಂಯೋಜಕರಾದ ವಿವೇಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!