ವೆನೆಜುವೆಲಾ ಮೇಲೆ ಅಮೆರಿಕ ವೈಮಾನಿಕ ದಾಳಿ: 40 ಮಂದಿ ಸಾವು
ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಲು ಅಮೆರಿಕ ಕ್ಯಾರಕಾಸ್‌ನಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ನಾಗರಿಕರು ಮತ್ತು ಮಿಲಿಟರಿ ಸಿಬ್ಬಂದಿ ಸೇರಿದಂತೆ 40 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ದಾಳಿಯಲ್ಲಿ ನಾಗರಿಕರು ಮತ್ತು ಸೈನಿಕರು ಸೇರಿದಂತೆ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ದಾಳಿಯ ಬಳಿಕ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಸೆರೆಹಿಡಿಯಲಾಗಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇನಾ ಪಡೆಗಳು ಮಡುರೊ ಅವರನ್ನು ವಶಪಡಿಸಿಕೊಂಡು ಅಮೆರಿಕಕ್ಕೆ ಕರೆತಂದಿರುವುದಾಗಿ ಘೋಷಿಸಿದ್ದಾರೆ. ಮಡುರೊ ಈಗ ಯುಎಸ್ ವಶದಲ್ಲಿರುವುದರಿಂದ, ತಾತ್ಕಾಲಿಕವಾಗಿ ವೆನೆಜುವೆಲಾದ ಮೇಲೆ ನಿಯಂತ್ರಣವನ್ನು ವಹಿಸಿಕೊಳ್ಳುತ್ತದೆ. ಅಲ್ಲಿ ಸುರಕ್ಷಿತ, ಸರಿಯಾದ ಆಡಳಿತ ಬರುವ ತನಕ ನಾವು ದೇಶವನ್ನು ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.




