ರಾಜ್ಯ

ಬಳ್ಳಾರಿ ಘಟನೆಯ ತನಿಖೆ ಸಿಬಿಐಗೆ ವಹಿಸಲು ನಿರಾಕರಿಸಿದ ಪರಮೇಶ್ವರ್

ಬೆಂಗಳೂರು: ಬಳ್ಳಾರಿಯಲ್ಲಿ ಇತ್ತೀಚೆಗೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಗೃಹ ಸಚಿವ ಜಿ ಪರಮೇಶ್ವರ ತಿರಸ್ಕರಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ನಮ್ಮ ಪೊಲೀಸ್ ಇಲಾಖೆಗೆ ತನಿಖೆ ಮಾಡುವ ಸಾಮರ್ಥ್ಯವಿದೆ. ಯಾವುದೇ ಪರಿಸ್ಥಿತಿಯನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾರೆ. ಅವರಿಗೆ ಮಾಡಲು ಸಾಧ್ಯವಾಗದ ಪರಿಸ್ಥಿತಿ ಬಂದರೆ ಸಿಬಿಐ ಅಥವಾ ಇತರ ಸಂಸ್ಥೆಗೆ ತನಿಖೆಗೆ ವಹಿಸಬಹುದು ಎಂದು ಹೇಳಬಹುದು. ಸಿಬಿಐಗೆ ನೀಡದಿರಲು ಈಗಾಗಲೇ ಸಂಪುಟದಲ್ಲಿ ತೀರ್ಮಾನಿಸಿದ್ದೇವೆ. ನ್ಯಾಯಾಲಯದ ಆದೇಶ ಬಂದರೆ ಅಥವಾ ಅಂತಹ ಪರಿಸ್ಥಿತಿ ಬಂದರೆ ಸಿಬಿಐಗೆ ಪ್ರಕರಣಗಳನ್ನು ನೀಡುವ ಬಗ್ಗೆ ನಾವು ನಿರ್ಧರಿಸುತ್ತೇವೆ. ತನಿಖೆಯನ್ನು ಈಗ ಸಿಬಿಐಗೆ ನೀಡುವ ಅಗತ್ಯವಿಲ್ಲ, ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಿಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!