ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ
ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಸುಳ್ಯದ ಅರಂಬೂರಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಪೋಷಕರು ದೂರು ನೀಡಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸಿರುವ ಪೊಲೀಸರು ಆರೋಪಿ ಅಬ್ದುಲ್ ಬಾಷಿತ್ (19)ನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.





