ಸರಕಾರಿ ನೌಕರರ ಕ್ರೀಡಾಕೂಟ: ಮಂಚಿ ಕುಕ್ಕಾಜೆ ಶಾಲೆಯ ಶಿಕ್ಷಕಿ ವಿನೋದ ಕುಮಾರಿ ರಾಜ್ಯ ಮಟ್ಟಕ್ಕೆ

ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ, ಮಂಚಿ ಕುಕ್ಕಾಜೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕಿ ವಿನೋದ ಕುಮಾರಿ ಬಿ ಅವರು ವಾಲಿಬಾಲ್ ಪ್ರಥಮ, ಥ್ರೋಬಾಲ್ ಪ್ರಥಮ, ಶಾಟ್ ಪುಟ್ ಪ್ರಥಮ, ಚಕ್ರ ಎಸೆತ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.


