ಕರಾವಳಿರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರ
ಕಾಂಗ್ರೆಸ್ ಸಾಮಾಜಿಕ ಜಾಲತಾಣ
ಅಧ್ಯಕ್ಷರಾಗಿ ಸುಪ್ರಿತ್ ಕಣ್ಣಾರಾಯ ಪುನರಾಯ್ಕೆ


ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮುಂಡೂರು ಗ್ರಾಮದ ನಿವಾಸಿ, ಯುವ ಕಾಂಗ್ರೆಸ್ ನಾಯಕರಾದ ಸುಪ್ರಿತ್ ಕಣ್ಣಾರಾಯರವರನ್ನು ಮರು ಆಯ್ಕೆಗೊಂಡಿದ್ದಾರೆ.


ಸೋಮವಾರ ನಡೆದ ಸಾಮಾಜಿಕ ಜಾಲತಾಣದ ಪ್ರಮುಖರ ಸಭೆಯಲ್ಲಿ ಶಾಸಕ ಅಶೋಕ್ ರೈ ಅವರು ಈ ನೇಮಕಾತಿ ಮಾಡಿದ್ದಾರೆ. ಇವರು ಪ್ರಸ್ತುತ ಪುತ್ತೂರು ಬ್ಲಾಕ್ ಕಾಂಗ್ರೆಸ್ ಘಟಕದ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿದ್ದರು. ಸಭೆಯಲ್ಲಿ ಒಮ್ಮತದಿಂದ ಇವರನ್ನು ಪುನರಾಯ್ಕೆ ಮಾಡಲಾಗಿದೆ. ಪುತ್ತೂರು ಬ್ಲಾಕ್, ವಿಟ್ಲ ಹಾಗೂ ಉಪ್ಪಿನಂಗಡಿಗೆ ಬ್ಲಾಕ್ ನ ಸಾಮಾಜಿಕ ಜಾಲತಾಣ ಘಟಕಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಮತ್ತು ಪ್ರತೀ ವಲಯ ಮತ್ತು ಬೂತ್ ಮಟ್ಟದಲ್ಲೂ ಸಾಮಾಜಿಕ ಜಾಲತಾಣಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎಂದು ಶಾಸಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!