ಅಂತಾರಾಷ್ಟ್ರೀಯಕ್ರೀಡೆರಾಷ್ಟ್ರೀಯ

ಇನ್‌ಸ್ಟಾಗ್ರಾಮ್ ನಿಂದ 12 ಗಂಟೆ ಕಾಣೆಯಾಗಿದ್ದ ಕೊಹ್ಲಿ!!



ಮುಂಬೈ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರ ಇನ್‌ಸ್ಟಾಗ್ರಾಮ್ ಖಾತೆ ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ಕಾಣೆಯಾಗಿದ್ದು, ಅಭಿಮಾನಿಗಳಲ್ಲಿ ಗೊಂದಲ ಮತ್ತು ಆತಂಕಕ್ಕೆ ಕಾರಣವಾಗಿತ್ತು. ಸುಮಾರು 12 ಗಂಟೆಗಳ ಬಳಿಕ ಕೊಹ್ಲಿ ಮತ್ತೆ ಇನ್‌ಸ್ಟಾಗ್ರಾಮ್‌ಗೆ ಮರಳಿದ್ದು, ಇದು ಅಭಿಮಾನಿಗಳಿಗೆ ಖುಷಿ ತಂದಿದೆ.


ವಿರಾಟ್ ಕೊಹ್ಲಿ ಭಾರತದಲ್ಲಷ್ಟೇ ಅಲ್ಲ, ಜಾಗತಿಕ ಮಟ್ಟದಲ್ಲೂ ಅಪಾರ ಜನಪ್ರಿಯತೆ ಹೊಂದಿರುವ ಕ್ರಿಕೆಟ್ ಆಟಗಾರ. ಇನ್‌ಸ್ಟಾಗ್ರಾಮ್‌ನಲ್ಲಿ ಅವರಿಗೆ ಸುಮಾರು 27 ಕೋಟಿ ಫಾಲೋವರ್ಸ್ ಇದ್ದಾರೆ. ಆದರೆ ಅಚ್ಚರಿಯ ರೀತಿಯಲ್ಲಿ ಅವರ ಖಾತೆ ಹುಡುಕಿದರೂ ಕಾಣಿಸದ ಕಾರಣ, ಕೊಹ್ಲಿ ಸೋಶಿಯಲ್ ಮೀಡಿಯಾಗೆ ಗುಡ್‌ಬೈ ಹೇಳಿದ್ದಾರೆ ಎಂಬ ವದಂತಿಗಳು ಹರಡಿದವು. ಕೆಲವರು ಖಾತೆ ಹ್ಯಾಕ್ ಆಗಿರಬಹುದೇ ಎಂಬ ಅನುಮಾನವೂ ವ್ಯಕ್ತಪಡಿಸಿದರು.

ಕೊಹ್ಲಿ ಅವರ ಖಾತೆ ಕಾಣಿಸದ ಹಿನ್ನೆಲೆಯಲ್ಲಿ, ಅವರ ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮಾ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳಲ್ಲಿಯೂ “ವಿರಾಟ್ ಕೊಹ್ಲಿ ಎಲ್ಲಿದ್ದಾರೆ?” ಎಂಬ ಪ್ರಶ್ನೆಗಳು ಕಾಮೆಂಟ್ ರೂಪದಲ್ಲಿ ಕಾಣಿಸಿಕೊಂಡವು. ಈ ಬೆಳವಣಿಗೆ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಚರ್ಚೆಗೆ ಕಾರಣವಾಯಿತು. ಗುರುವಾರ ರಾತ್ರಿ ನಿಷ್ಕ್ರಿಯಗೊಂಡಿದ್ದ ಕೊಹ್ಲಿ ಅವರ ಇನ್‌ಸ್ಟಾಗ್ರಾಮ್ ಖಾತೆ, ಶುಕ್ರವಾರ ಬೆಳಿಗ್ಗೆ ಸುಮಾರು 8ರಿಂದ 8.30ರ ವೇಳೆಗೆ ಮತ್ತೆ ಸಕ್ರಿಯಗೊಂಡಿದೆ. ಖಾತೆ ತಾಂತ್ರಿಕ ಕಾರಣಗಳಿಂದ ತಾತ್ಕಾಲಿಕವಾಗಿ ಸ್ಥಗಿತ ಆಗಿತ್ತಾ ಅಥವಾ ಇದು ಕೊಹ್ಲಿ ಅವರ ವೈಯಕ್ತಿಕ ನಿರ್ಧಾರವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

Leave a Reply

Your email address will not be published. Required fields are marked *

error: Content is protected !!