ಕರಾವಳಿಕ್ರೈಂ

ವಿಟ್ಲ: ವ್ಯಕ್ತಿಗೆ ಹಲ್ಲೆ –ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ವಿಟ್ಲ: ವ್ಯಕ್ತಿಯೋರ್ವರ ಮೇಲೆ ಮುಸುಕುಧಾರಿಗಳ ತಂಡವೊಂದು ಕೈಯಿಂದ ಹಾಗೂ ಕಟ್ಟಿಗೆ ತುಂಡಿನಿಂದ ಹಲ್ಲೆ ನಡೆಸಿ ಮೊಬೈಲ್ ಎಗರಿಸಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.




ಬಂಟ್ವಾಳ ತಾಲೂಕು ವಿಟ್ಲ ಪಡೂರು ಗ್ರಾಮದ ಇಸುಬು(56 ವ.) ಎಂಬವರು ಜ.31ರಂದು ರಾತ್ರಿ ವಿಟ್ಲ ಕಸಬಾ ಗ್ರಾಮದ ಮಾರ್ನಮಿಗುಡ್ಡೆ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಟ್ಟೆಯಿಂದ ಮುಖ ಮುಚ್ಚಿಕೊಂಡು ಬಂದಿದ್ದ ಮೂವರು ಯುವಕರು ಇಸುಬುರವರಿಗೆ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಹಾಗೂ ಕಟ್ಟಿಗೆ ತುಂಡಿನಿಂದ ಹೊಡೆದು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು ಎಂದು ಆರೋಪ ವ್ಯಕ್ತವಾಗಿದೆ. ಈ ಬಗ್ಗೆ ಗಾಯಾಳು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ರವೀಶ್ ಕುಲಾಲ್ ಹಾಗೂ ಅಶೋಕ್ ಎಂಬವರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!