ಮಂಗಳೂರು: ಮಾದಕ ವಸ್ತು ಮಾರಾಟ -ಯುವಕನ ಬಂಧನ
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶ್ರೀರಂಗಪಟ್ಟಣ ಹುಲಿಕೆರೆ ನಿವಾಸಿ ಜೋರ್ಡನ್,(21 ) ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಬಂಧಿತನಿಂದ 55 ಗ್ರಾಂ ಎಮ್ ಡಿಎಮ್ ಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕದ ಮಾಪನ ಯಂತ್ರ ಸಹಿತ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





