ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣ- ಆರೋಪಿಗಳ ಪತ್ತೆ ಹಚ್ಚಿ-ಪೂಂಜಾ

ಬೆಳ್ತಂಗಡಿ: ತಾಲೂಕಿನಲ್ಲಿ ವಿದ್ಯಾರ್ಥಿನಿಯೋರ್ವಳನ್ನು ಅಪಹರಣಕ್ಕೆ ಯತ್ನಿಸಿದ ಘಟನೆ ಚಿಕ್ಕ ಘಟನೆಯಲ್ಲ, ಈ ರೀತಿ ಘಟನೆ ಸಮಾಜದಲ್ಲಿ ಜನತೆ ಓಡಾಡಲು ಹೆದರುವ ಪರಿಸ್ಥಿತಿ ನಿರ್ಮಾಣ ಆಗಿದೆ, ಜನರು ಆತಂಕಗೊಂಡಿದ್ದು ಇದನ್ನು ಗೃಹ ಇಲಾಖೆ ನಿವಾರಣೆ ಮಾಡಬೇಕು ಮತ್ತು ಆರೋಪಿಗಳನ್ನು ತಕ್ಷಣ ಪತ್ತೆ ಹಚ್ಚುವ ಕಾರ್ಯ ಆಗಬೇಕಾಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.
ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ಭೇಟಿ ನೀಡಿ ವಿಧ್ಯಾರ್ಥಿನಿಯ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದ ಗೃಹ ಇಲಾಖೆಯ ವೈಫಲ್ಯದಿಂದ ಇಂತಹ ಘಟನೆಗಳು ಆಗುತ್ತಿದೆ ಎಂದು ಅವರು ಆರೋಪಿಸಿದರು.





