ಉಪ್ಪಿನಂಗಡಿ: ಮಾದಕ ವಸ್ತು ಎಂ.ಡಿ.ಎಂ.ಎ ಹೊಂದಿದ್ದ ಆರೋಪಿಯ ಬಂಧನ
ಪುತ್ತೂರು: ಮಾದಕ ವಸ್ತು ಎಂ ಡಿ ಎಂ ಎ ಹೊಂದಿದ್ದ ಆರೋಪಿಯೊಬ್ಬನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಫೆ.10ರಂದು ಉಪ್ಪಿನಂಗಡಿ ಗ್ರಾಮದ ಪಂಜಳಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಆರೋಪಿಯು ಮಾರಾಟದ ಉದ್ದೇಶದಿಂದ ಎಂ.ಡಿ.ಎಂ.ಎ. ಹೊಂದಿರುವುದಾಗಿ ಒಪ್ಪಿಕೊಂಡಿದ್ದ. ಬಂಧಿತ ಆರೋಪಿಯನ್ನು ಯಹ್ಯಾ ಕೊಕ್ಕಡ (48) ಎಂದು ಗುರುತಿಸಲಾಗಿದೆ.
ಆತನಿಂದ ಒಟ್ಟು 2.16 ಗ್ರಾಂ ಎಂ.ಡಿ.ಎಂ.ಎ. (ಅಂದಾಜು ಮೌಲ್ಯ ರೂ. 3,000/-), ಒಂದು ಐಫೋನ್ (ರೂ. 45,000/-), ಒಂದು ಸ್ಯಾಮ್ಸಂಗ್ ಕೀ-ಪ್ಯಾಡ್ ಮೊಬೈಲ್ (ರೂ. 1,000/-) ಸೇರಿದಂತೆ ಒಟ್ಟು ರೂ. 49,000/- ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 19/2026
ಕಲಂ: 8(ಸಿ), 22(ಬಿ) ಎನ್‌ಡಿಪಿಎಸ್ ಕಾಯ್ದೆ ಯಂತೆ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.





