ಕರಾವಳಿಕ್ರೈಂ

ವಿಟ್ಲ: ವಿದ್ಯಾರ್ಥಿಗಳ ಮಧ್ಯೆ ಜಗಳ, ಚೂರಿ ಇರಿತ

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮಧ್ಯೆ ಪರಸ್ಪರ ವಾಗ್ವಾದ ನಡೆದು ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ ಸಂಭವಿಸಿದ ಘಟನೆ ವಿಟ್ಲದ ಖಾಸಗಿ ಐಟಿಐ ಒಂದರಲ್ಲಿ ನಡೆದಿದೆ.


ಫೆ.11ರಂದು ವಿಟ್ಲದ ಖಾಸಗಿ ಐಟಿಐಯಲ್ಲಿ ವಿದ್ಯಾರ್ಥಿಗಳ ನಡುವೆ ಚೂರಿ ಇರಿತ ನಡೆದಿದೆ. ಆರಂಭದಲ್ಲಿ ಇಬ್ಬರ ಮಧ್ಯೆ ವಾಗ್ವಾದ ನಡೆದು ಬಳಿಕ ಚೂರಿ ಇರಿತ ಸಂಭವಿಸಿದ್ದು,ಘಟನೆಯಿಂದಾಗಿ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಗಲಾಟೆ ಬಿಡಿಸಲು ಹೋದ ವಿದ್ಯಾರ್ಥಿಗೂ ಗಾಯವಾಗಿರುವುದಾಗಿ ಮಾಹಿತಿ ಲಭಿಸಿದೆ. ಈ ಪೈಕಿ ಇಬ್ಬರು ವಿದ್ಯಾರ್ಥಿಗಳನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್‌ ದೇವಾಡಿಗರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!