ರಿಯಾದ್ನಲ್ಲಿರುವ ಅಮೆರಿಕಾ ರಾಯಭಾರಿ ಕಚೇರಿ ಗುರಿಯಾಗಿಸಿ ಇರಾನ್ ನಿಂದ ಡ್ರೋನ್ ದಾಳಿ
ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿರುವ ಅಮೆರಿಕಾ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಂದು ಮುಂಜಾನೆ ಡ್ರೋನ್ ದಾಳಿ ನಡೆದಿದೆ.

ಇರಾನ್ ಬೆಂಬಲಿತ ಪಡೆಗಳು ಈ ಕೃತ್ಯ ಎಸಗಿದೆ ಎನ್ನಲಾಗಿದ್ದು ಘಟನೆಯಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಇನ್ನಷ್ಟು ಹೆಚ್ಚಾಗಿದೆ. ರಿಯಾದ್ನ ಡಿಪ್ಲೊಮ್ಯಾಟಿಕ್ ಕ್ವಾರ್ಟರ್ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಎರಡು ಡ್ರೋನ್ ದಾಳಿ ನಡೆಸಿವೆ.
ದಾಳಿಯಿಂದಾಗಿ ಕಚೇರಿಯ ಆವರಣದಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ರಿಯಾದ್ ಮೇಲೆ ದಾಳಿ ಮಾಡಲು ಬಂದಿದ್ದ ಇತರ ನಾಲ್ಕು ಡ್ರೋನ್ ಗಳನ್ನು ಸೌದಿ ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ ಎಂದು ತಿಳಿದು ಬಂದಿದೆ.





