ಕರಾವಳಿ

ವಿದ್ಯುತ್‌ ಕಂಬಕ್ಕೆ ಬೈಕ್ ಡಿಕ್ಕಿ, ಕುಂಬ್ರದ ಯುವಕ ಮೃತ್ಯು


ಪುತ್ತೂರು: ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಕುಂಬ್ರ ನಿವಾಸಿ ಭುವನ್ ಗೌಡ ( 34 ವ) ಸಾವಿಗೀಡಾದ ಘಟನೆ ಮಾ.3 ರಂದು ತಿಂಗಳಾಡಿ ಸಮೀಪದ ತ್ಯಾಗರಾಜ ನಗರದಲ್ಲಿ ನಡೆದಿದೆ.

ಕುಂಬ್ರ ಶಾಲಾ ಬಳಿಯ ನಿವಾಸಿ ಭುವನ್ ಗೌಡರವರು ನಿಂತಿಕಲ್ಲುನಲ್ಲಿರುವ ಬಾರ್ ವೊಂದರಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದು ಮಾ.3 ರಂದು ಸಂಜೆ ಕೆಲಸ ಮುಗಿಸಿ ಮನೆ ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ತಿಂಗಳಾಡಿ ಸಮೀಪದ ತ್ಯಾಗರಾಜನಗರದಲ್ಲಿ ಮಚ್ಚಾರಡ್ಕಕ್ಕೆ ತಿರುಗುವ ಬಳಿ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಭುವನ್ ರವರು ರಸ್ತೆ ಬದಿಗೆ ಎಸೆಯಲ್ಪಟ್ಟಿದ್ದರು. ತಕ್ಷಣವೇ ಅವರನ್ನು ಸ್ಥಳೀಯರು ಮೆಡ್ ಲ್ಯಾಂಡ್ ಆಸ್ಪತ್ರೆಗೆ ಕರೆ ತಂದು ಅಲ್ಲಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದರು. ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!