ವಿಟ್ಲ: ಸೈಕಲಿನಿಂದ ಬಿದ್ದು ಬಾಲಕ ಮೃತ್ಯು
ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಗ್ರಾಮದ ತಾಳಿತ್ತನೂಜಿ ಎಂಬಲ್ಲಿ ಶುಕ್ರವಾರ ಸಂಜೆ ನಡೆ ದಿರುವುದು ವರದಿಯಾಗಿದೆ.

ಮೃತ ಬಾಲಕನನ್ನು ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮಾ ಎಂಬವರ ಪುತ್ರ ಆಸಿಫ್(12ವ) ಎಂದು ಗುರುತಿಸಲಾಗಿದೆ.
ಆಸಿಫ್ ಸ್ಥಳೀಯ ಮದ್ರಸದಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂದಿರುಗುವ ವೇಳೆ ಈ ಅವಘಡ ಸಂಭವಿಸಿದೆ. ರಸ್ತೆಯ ತಿರುವಿನಲ್ಲಿ ಸೈಕಲ್ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಬಾಲಕ ತೀವ್ರ ಅಸ್ವಸ್ಥಗೊಂಡಿದ್ದನು. ತಕ್ಷಣ ತುಂಬೆಯ ಖಾಸಗಿ ಸಾಗಿಸಲಾಯಿತಾದರೂ ಅಷ್ಟರಲ್ಲಿ ಆಸಿಫ್ ಕೊನೆಯುಸಿರೆಳೆದಿದ್ದ ಎಂದು ತಿಳಿದುಬಂದಿದೆ.
ಆಸಿಫ್ ತಾಳಿತ್ತನೂಜಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾಗಿದ್ದ.





