ಉಪ್ಪಿನಂಗಡಿ: ಬೈಕ್‌ಗೆ ಕಾರು ಡಿಕ್ಕಿ- ಬೈಕ್ ಸವಾರ ಮೃತ್ಯು
ಉಪ್ಪಿನಂಗಡಿ: 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.8ರಂದು ನಡೆದಿದೆ. ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಮೃತಪಟ್ಟವರು.

ಬಂದಾರು ಗ್ರಾಮದ ಕುರಾಯ ನಿವಾಸಿಯಾಗಿರುವ ಚಿದಾನಂದ ಗೌಡರವರು ಕಾರ್ಯನಿಮಿತ್ತ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರೊಂದು ಡಿಕ್ಕಿ ಹೊಡೆಯಿತು. ಈ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.





