ಬಂಟ್ವಾಳ: ಚಿನ್ನಾಭರಣ ಕಳವು ಪ್ರಕರಣ-ಆರೋಪಿಯ ಬಂಧನ
ಬಂಟ್ವಾಳ:: ಬಸ್ ನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೊಲೀಸರ ತಂಡ ಬಂಧಿಸಿದ್ದು ಕದ್ದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಮಧ್ಯಪ್ರದೇಶದ ನಿವಾಸಿ ಸಮದ್ ಖಾನ್ (37) ಎಂದು ಗುರುತಿಸಲಾಗಿದೆ.

2025ರ ನ.19ರಂದು ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ಬಸ್ನಲ್ಲಿ ಬ್ಯಾಗ್ ನೊಳಗೆ ಇರಿಸಿದ್ದ ಬ್ರಹ್ಮಾವರ ಮೂಲದ ದಂಪತಿಯ 20 ಲಕ್ಷ ರೂ. ಮೌಲ್ಯದ 180 ಗ್ರಾಂ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸರು 174 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡು, ಆತನನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.





