ಕರಾವಳಿಕ್ರೈಂ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ


ಮಂಗಳೂರು: ಅಪ್ರಾಪ್ತ ಪ್ರಾಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ದೋಷಿ ಅಬೂಬಕ್ಕರ್ (50) ಎಂಬಾತನಿಗೆ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (FTSC-2) 20 ವರ್ಷಗಳ ಜೈಲು ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಸಾಂದರ್ಭಿಕ ಚಿತ್ರ


ಪ್ರಕರಣದ ಹಿನ್ನೆಲೆ:
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣದಲ್ಲಿ (ಅ ಕ್ರ 135/25), ಆರೋಪಿಯ ವಿರುದ್ಧ ಬಿ.ಎನ್.ಎಸ್ (BNS) ಕಲಂ 64 (1), 351(2) ಮತ್ತು ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅಂದಿನ ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ ರವರು ಶೀಘ್ರ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳೊಂದಿಗೆ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ (FTSC-2) ಸುದೀರ್ಘ ವಿಚಾರಣೆ ನಡೆದಿದ್ದು, ದಿನಾಂಕ 07.03.2026 ರಂದು ಆರೋಪಿಯು ದೋಷಿ ಎಂದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

Leave a Reply

Your email address will not be published. Required fields are marked *

error: Content is protected !!