ಕರಾವಳಿಕ್ರೈಂ

ಶಿರಾಡಿ ಘಾಟ್‌ ಸಮೀಪ ಭೀಕರ ಅಪಘಾತ: ಮೂವರು ಸಾವು, ಓರ್ವ ಗಂಭೀರ


ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಸಮೀಪ ಶುಕ್ರವಾರ (ಮಾ.13) ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಮಧ್ಯಾಹ್ನ ಸುಮಾರು 3:30 ಗಂಟೆಗೆ ಹಾಸನದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು ಮತ್ತು ಧರ್ಮಸ್ಥಳದಿಂದ ತಿರುಪತಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.


ಅಪಘಾತದಲ್ಲಿ ಕಾರಿನಲ್ಲಿದ್ದ ಶಿಶಿಲ ನಿವಾಸಿ ಚಂದ್ರಶೇಖರ (57), ಉಜಿರೆ ನಿವಾಸಿ ಜನಾರ್ದನ ಗೌಡ (58), ಮರಕಡ ನಿವಾಸಿ ಶ್ರೀಧರ ಗೌಡ (61) ಮೃತಪಟ್ಟವರು.
ಕಾರಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕರಾದ ಉಜಿರೆಯ ಸುರೇಶ (58), ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!