ಕರಾವಳಿಕ್ರೈಂ

ಮಂಗಳೂರು: ಬಾಲಕನಿಗೆ ಲೈಂಗಿಕ ದೌರ್ಜನ್ಯ, ಯುವಕನ ಬಂಧನ

ಮಂಗಳೂರು: 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾ.18ರಂದು ನೀಡಿದ ದೂರಿನ ಮೇರೆಗೆ, ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.

ಬಾಲಕನಿಗೆ ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದು ಬೆಳಕಿಗೆ ಬಂದಿದ್ದು
ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ POCSO ಕಾಯ್ದೆಯ ಸೆಕ್ಷನ್ 4, 6, 12 ಹಾಗೂ BNS ಕಾಯ್ದೆಯ ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಮಡ್ಯಾರ್, ಕೋಟೆಕಾರು ಆಶೀಶ್ ಪೂಜಾರಿ (33)ಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!