ಕರಾವಳಿಕ್ರೈಂರಾಜ್ಯ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ: ಮತ್ತೊಂದು ಪ್ರಕರಣ ದಾಖಲು


ಪುತ್ತೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ  ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಪ್ರಕರಣದ ವಿವರ:
2018ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಲ್ಲೆ, ಬೆದರಿಕೆ ಹಾಗೂ ವಂಚನೆ ಪ್ರಕರಣದಲ್ಲಿ  ಆರೋಪಿಯಾಗಿರುವ ಕೇರಳದ ಮಲಪ್ಪುರಂ ನಿವಾಸಿ ನಿಖಿಲ್ ಕೆ (36) ಎಂಬಾತ ಈ ಹಿಂದೆ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದಿದ್ದ. ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.


ಪುತ್ತೂರು ನಗರ ಪೊಲೀಸ್ ಉಪನಿರೀಕ್ಷಕ ಜನಾರ್ಧನ ಕೆ.ಎಂ. ಮತ್ತು ಅವರ ತಂಡ ಮಾ.21.ರಂದು ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಶಿಲುವೈಪುರ ಎಂಬಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.



ಜಾಮೀನು ಪಡೆದ ನಂತರ ನ್ಯಾಯಾಲಯದ ಷರತ್ತುಗಳನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದಕ್ಕಾಗಿ, ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಇದೀಗ ಹೊಸದಾಗಿ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 269 ರ ಅಡಿಯಲ್ಲಿ ಪ್ರಕರಣ (ಅ.ಕ್ರ: 34/2026) ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!