ಮಾದಕ ವಸ್ತು ಮಾರಾಟ ಆರೋಪಿಯ ಬಂಧನ
ಕೊಣಾಜೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕೊಣಾಜೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಕೂಳೂರು ಕಸಬ ಬೆಂಗ್ರೆ ನಿವಾಸಿ ಮುಹಮ್ಮದ್ ಝಾಕಿರ್ ಹುಸೈನ್(19) ಬಂಧಿತ ಆರೋಪಿ. ಆತನಿಂದ 10.6 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್, ಸಿರಿಂಜ್, ಸಿಗರ್ ಲೈಟರ್ ಹಾಗೂ ನಂಬರ್ ಪ್ಲೇಟ್ ಇಲ್ಲದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



