ಉಪ್ಪಿನಂಗಡಿ: ಮಾದಕದ್ರವ್ಯ ಸೇವಿಸಿ ಅನುಚಿತ ವರ್ತನೆ-ಯುವಕ ಪೊಲೀಸ್ ವಶಕ್ಕೆ
ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೋರ್ವನನ್ನು ಮಾದಕದ್ರವ್ಯ ಸೇವಿಸಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಮಾ.22ರಂದು ಸಂಜೆ, ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ವೇಲು ಎಂಬಲ್ಲಿ ಯುವಕನೊಬ್ಬ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವಂತೆ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ

ಬಂಧಿತ ಯುವಕನನ್ನು ಕೇರಳದ ಕಾಸರಗೋಡು ನಿವಾಸಿ ಯೂಸುಫ್ ಸಿ.ಇ (28) ಎಂದು ಗುರುತಿಸಲಾಗಿದೆ.
ಯುವಕನ ನಡವಳಿಕೆಯಲ್ಲಿ ಸಂಶಯ ಕಂಡುಬಂದ ಹಿನ್ನೆಲೆಯಲ್ಲಿ, ಆತ ಮಾದಕದ್ರವ್ಯ ಸೇವಿಸಿರಬಹುದೇ ಎಂದು ಖಚಿತಪಡಿಸಿಕೊಳ್ಳಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆಯಲ್ಲಿ ಆತ ಮಾದಕದ್ರವ್ಯ ಸೇವಿಸಿರುವುದು ದೃಢಪಟ್ಟಿದೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



