ಕರಾವಳಿಕ್ರೈಂ

ಮಂಗಳೂರು: ಆಟೋ ರಿಕ್ಷಾದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಬಂಧನ


ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯ ವೇಳೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.


ಬಂಧಿತ ಆರೋಪಿಗಳನ್ನು
ಹೈದರ್ ಅಲಿಯಾಸ್ ಹೈದರ್ ಆಲಿ (53) ಚೆಂಬುಗುಡ್ಡೆ, ತೊಕ್ಕೊಟ್ಟು,ಮೊಹಮ್ಮದ್ ಸಜಾದ್ (29) ಚೆಂಬುಗುಡ್ಡೆ, ತೊಕ್ಕೊಟ್ಟು, ಹಾಗೂ ಮೂಲತಃ ಉಡುಪಿ ಜಿಲ್ಲೆಯ ಶಿರ್ವದವರಾಗಿದ್ದು, ಪ್ರಸ್ತುತ ಮಂಗಳೂರಿನ ಪಂಪ್‌ವೆಲ್‌ನಲ್ಲಿ ವಾಸವಾಗಿರುವ ಜೈಸನ್ ಮೆನೆಜಸ್ (26) ಎಂದು ಗುರುತಿಸಲಾಗಿದೆ.



ಪಂಪ್‌ವೆಲ್-ಎಕ್ಕೂರು ಪರಿಸರದಲ್ಲಿ ಆಟೋ ರಿಕ್ಷಾವೊಂದರಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಮಾರ್ಚ್ 22ರಂದು ದಾಳಿ ನಡೆಸಿದ್ದಾರೆ.
ಬಂಧಿತರಿಂದ ಒಟ್ಟು ರೂ. 4,37,500/- ಮೌಲ್ಯದ ಈ ಕೆಳಗಿನ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ:
• ಎಂಡಿಎಂಎ: 26 ಗ್ರಾಂ (ಅಂದಾಜು ಮೌಲ್ಯ ರೂ. 2,50,000/-)
• ನಗದು: ರೂ. 37,000/-
• ಇತರ ವಸ್ತುಗಳು: 5 ಮೊಬೈಲ್ ಫೋನ್‌ಗಳು ಮತ್ತು ಡಿಜಿಟಲ್ ತೂಕಮಾಪನ ಯಂತ್ರ.
• ವಾಹನ: ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ
ಬಂಧಿತರಲ್ಲಿ ಹೈದರ್ ಆಲಿ ಎಂಬಾತನ ಮೇಲೆ ಈ ಹಿಂದೆಯೂ ಮಂಗಳೂರು ಪೂರ್ವ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಗಳು ದಾಖಲಾಗಿದ್ದವು. ಅಲ್ಲದೆ ಉಳ್ಳಾಲ ಠಾಣೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪವೂ ಈತನ ಮೇಲಿದೆ.
ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ಮುಂದುವರಿದಿದೆ. ಪ್ರಕರಣವು ಪ್ರಸ್ತುತ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!