ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

2023ರ ಜೂ.9ರಂದು ರಾತ್ರಿ ಪುತ್ತೂರು ತಾಲೂಕಿನ ನೆಹರೂ ನಗರ ಎಂಬಲ್ಲಿ ಹುಲಿವೇಷ ತಂಡವಾದ ಕಲ್ಲೇಗ ಟೈಗರ್ಸ್’ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ(24) ಪರಿಚಿತರಿಂದಲೇ ಹತ್ಯೆಗೀಡಾಗಿದ್ದರು. ಈ ಸಂಬಂಧ ಪಡೀಲು ನಿವಾಸಿ ಮನೀಶ್, ಕೃಷ್ಣನಗರದ ಚೇತನ್, ಬನ್ನೂರಿನ ಮಂಜುನಾಥ್ ಯಾನೆ ಹರಿ ಹಾಗೂ ಕೇಶವ ಪಡೀಲ್ ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಸರಿತಾ ಡಿ., ಇಬ್ಬರಿಗೆ ಜಾಮೀನು ನೀಡಿ ಆದೇಶಿಸಿದ್ದಾರೆ.



