ಕರಾವಳಿಕ್ರೈಂ

ರೌಡಿಶೀಟರ್ ಆರಿಫ್ ಕೊಲೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಕಾರು ಪತ್ತೆ

ವಿಟ್ಲ: ತೊಕ್ಕೊಟ್ಟು ಫೈಓವರ್ ಮೇಲೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಲಾಗಿದ್ದ ಕಾರು ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.



ಆರಿಫ್‌ನನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ತನಿಖೆ ಚುರುಕುಗೊಳಿಸಿದ್ದ ಪೊಲೀಸರಿಗೆ ಬಂಟ್ವಾಳದ ಬುಡೋಳಿಯಲ್ಲಿ ಶಂಕಾಸ್ಪದ ರೀತಿಯಲ್ಲಿ ಕಾರು ಇರುವ ಬಗ್ಗೆ ಮಾಹಿತಿ ಲಭಿಸಿದೆ. ಕೂಡಲೇ ಕಾರ್ಯಪ್ರವೃತ್ತರಾದ ವಿಟ್ಲ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದ ತಂಡ ಕಾರನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!