ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ಸ್: ಆರೋಪಿಯ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್‌ಗಳನ್ನು ಹಾಕಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಜೇಶ್ವರದ ಗಣೇಶ್ ಪ್ರಸಾದ್ (41) ಎಂಬಾತನನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಗಣೇಶ್ ಪ್ರಸಾದ್ ವಿರುದ್ದ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಕಾಯ್ದೆಗಳಂತೆ ಪ್ರಕರಣ ದಾಖಲಾಗಿತ್ತು. ಮಾ.27ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



