ಟ್ರಂಪ್ ವಿರುದ್ಧ ಅಮೆರಿಕ ಜನರ ಆಕ್ರೋಶ, ನೋ ಕಿಂಗ್ಸ್ ಪ್ರತಿಭಟನೆ
ಅಮೆರಿಕ: ಅಮೆರಿಕ ಜನರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಬಿದಿಗಿಳಿದಿದ್ದಾರೆ. ‘ನೋ ಕಿಂಗ್ಸ್’ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಅಮೆರಿಕದ ಸುಮಾರು 50 ನಗರಗಳಲ್ಲಿ ಟ್ರಂಪ್ ವಿರುದ್ಧ ಪ್ರತಿಭಟನೆಗಳು ನಡೆದು ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಟ್ರಂಪ್ ಅವರ ನೀತಿಗಳು, ಹೆಚ್ಚುತ್ತಿರುವ ಹಣದುಬ್ಬರ ಮತ್ತು ಇರಾನ್ ವಿರುದ್ಧದ ಯುದ್ಧದ ಬಗ್ಗೆ ಜನರು ಆಕ್ರೋಶಗೊಂಡಿದ್ದು ಅಮೆರಿಕದಾದ್ಯಂತ ಜನರು ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಾರೆ.

ಅಮೇರಿಕಾದ ಪ್ರಮುಖ ನಗರಗಳಲ್ಲಿ ದೊಡ್ಡ ಮೆರವಣಿಗೆಗಳು ನಡೆದಿದ್ದು ಟ್ರಂಪ್ ಅವರ ನೀತಿಗಳನ್ನು ಟೀಕಿಸಿದ್ದಾರೆ. ಯುರೋಪ್ ನಲ್ಲೂ ಟ್ರಂಪ್ ವಿರುದ್ಧ ಜನರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ, ಫಲಕಗಳನ್ನು ಬೀಸುತ್ತಾ ಟ್ರಂಪ್ ವಿರುದ್ಧ ತಮ್ಮ ಕೋಪವನ್ನು ವ್ಯಕ್ತಪಡಿಸಿದರು. ಇರಾನ್ ವಿರುದ್ಧದ ಯುದ್ಧವನ್ನು ನಿಲ್ಲಿಸುವಂತೆ ಅವರು ಟ್ರಂಪ್ ಆಡಳಿತವನ್ನು ಒತ್ತಾಯಿಸಿದ್ದಾರೆ. ಜಗತ್ತಿನ ಇತರ ದೇಶಗಳಲ್ಲೂ ಅಮೇರಿಕ ವಿರುದ್ಧ ಪ್ರತಿಭಟನೆ ನಡೆದಿದ್ದು ಟ್ರಂಪ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.



