ಬೆಳ್ತಂಗಡಿ: ಚಲಿಸುತ್ತಿದ್ದ ಬಸ್‌ನಿಂದ ರಸ್ತೆಗೆ ಬಿದ್ದು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ
ಬೆಳ್ತಂಗಡಿ: ಚಲಿಸುತ್ತಿದ್ದ ಬಸ್‌ನ ಬಾಗಿಲು ಏಕಾಏಕಿ ಓಪನ್ ಆದ ಪರಿಣಾಮ ವಿದ್ಯಾರ್ಥಿನಿಯರು ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪ ನಡೆದಿದೆ.

ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸರ್ಕಾರಿ ಬಸ್ ಸಂಚರಿಸುತ್ತಿತ್ತು. ಸಂಚಾರದ ವೇಳೆ ಇದ್ದಕ್ಕಿದ್ದಂತೆ ಬಸ್‌ನ ಬಾಗಿಲು ತೆರೆದಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿವೆ.
ಗಾಯಾಳು ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರು ಬಸ್‌ನಿಂದ ಬಿದ್ದ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.



