ಬಾವಿಗೆ ಉರುಳಿ ಬಿದ್ದ ಕಾರು, 9 ಮಂದಿ ದುರ್ಮರಣ
ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ಮುಂದುವರಿದಿದ್ದು, ಘಟನೆ ಕುರಿತು ತನಿಖೆ ನಡೆಯುತ್ತಿದೆ. ಮೃತಪಟ್ಟವರು ಎಲ್ಲರೂ ಒಂದೇ ಕುಟುಂಬದವರಾಗಿದ್ದಾರೆ. ಈ ಘಟನೆ ಕಳೆದ ತಡರಾತ್ರಿ ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಯ ದಿನ್ಡೋರಿ ತಾಲ್ಲೂಕಿನಲ್ಲಿ ಸಂಭವಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಕುಟುಂಬದವರು ದಿನ್ಡೋರಿ ತಾಲ್ಲೂಕಿನ ಇಂದೋರ್ ಗ್ರಾಮದ ನಿವಾಸಿಗಳಾಗಿದ್ದರು. ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ನೀರಿನಿಂದ ತುಂಬಿದ ಬಾವಿಗೆ ಬಿದ್ದಿದೆ. ಮಕ್ಕಳು ಸಹಿತ ಕಾರಲ್ಲಿದ್ದ 9 ಮಂದಿ ಮೃತಪಟ್ಟಿದ್ದಾರೆ.



