ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ-ಡಿ.ಕೆ.ಶಿ
ಹುಬ್ಬಳ್ಳಿ: ರಾಜ್ಯದ ಎರಡು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಎಲ್.ಪಿ.ಜಿ ದರಗಳನ್ನು ಹೆಚ್ಚಿಸಿದ ಹಿನ್ನೆಲೆಯಲ್ಲಿ ಜನರಲ್ಲಿ ನಿರಾಶೆ ಮೂಡಿದೆ, ಜನರು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಮೇಲೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ, “ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುವುದು ಖಚಿತ” ಎಂದು ಹೇಳಿದರು. ಕೇರಳ ಚುನಾವಣೆಯ ಕುರಿತು ಅವರು, ಕಾಂಗ್ರೆಸ್ ಮತ್ತು ಯುಡಿಎಫ್ ಮೈತ್ರಿಕೂಟವು ಬಹುಮತದೊಂದಿಗೆ ಗೆಲ್ಲಲಿದೆ ಎಂದು ಭವಿಷ್ಯನುಡಿದರು.



