ಅಂತಾರಾಷ್ಟ್ರೀಯ

ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವ  ದೇಶಗಳಿಗೆ ಶೇ.50ರಷ್ಟು ಸುಂಕ-ಟ್ರಂಪ್

ವಾಷಿಂಗ್ಟನ್: ಇರಾನ್ ಜೊತೆಗಿನ ಯುದ್ಧ ಎರಡು ವಾರಗಳ ಕದನ ವಿರಾಮ ಘೋಷಣೆ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಇರಾನ್‌ಗೆ ಸೇನಾ ಶಸ್ತ್ರಾಸ್ತ್ರಗಳನ್ನು ಪೂರೈಸುವ ಯಾವುದೇ ದೇಶ ಅಮೆರಿಕಕ್ಕೆ ರಫ್ತು ಮಾಡುವ ಎಲ್ಲಾ ಸರಕುಗಳ ಮೇಲೆ ಶೇ.50ರಷ್ಟು ಸುಂಕ ಹಾಕುವುದಾಗಿ ತಿಳಿಸಿದ್ದಾರೆ.

ತಮ್ಮದೇ ಒಡೆತನದ ಟ್ರೂತ್ ಸಾಮಾಜಿಕ ಜಾಲತಾಣ ಪೋಸ್ಟ್‌ನಲ್ಲಿ, ಈ ಕ್ರಮ ತಕ್ಷಣದಿಂದಲೇ ಜಾರಿಗೆ ಬರುತ್ತದೆ. ಇದರಿಂದ ಯಾವುದೇ ರೀತಿಯ ವಿನಾಯಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಕದನ ವಿರಾಮ ಒಪ್ಪಂದದ ಭಾಗವಾಗಿ, ಯುರೇನಿಯಂ ಪುಷ್ಟೀಕರಣ ಕಾರ್ಯಕ್ರಮವನ್ನು ನಿಲ್ಲಿಸಲು ಇರಾನ್ ಒಪ್ಪಿದೆ ಎಂದು ಟ್ರಂಪ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!