ಸುಳ್ಯ: ಕೆಲಸಕ್ಕೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ -ಅಂಗಡಿ ಮಾಲೀಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಸುಳ್ಯ: ಶಾಲಾ ರಜೆಯ ಸಮಯದಲ್ಲಿ ಅಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಂಗಡಿ ಮಾಲೀಕನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಸಂತ್ರಸ್ತ ಬಾಲಕಿಯು ಶಾಲಾ ರಜಾ ಅವಧಿಯಾಗಿದ್ದರಿಂದ ಏ.1ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯೊಂದಕ್ಕೆ ಕೆಲಸಕ್ಕೆ ಸೇರಿಕೊಂಡಿದ್ದರು. ಮರುದಿನ, ಅಂದರೆ ಏ.2ರಂದು ಬೆಳಿಗ್ಗೆ ಬಾಲಕಿ ಕೆಲಸಕ್ಕೆ ಹಾಜರಾದ ಸಮಯದಲ್ಲಿ ಅಂಗಡಿ ಮಾಲೀಕ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಏ.8ರಂದು ಸಂತ್ರಸ್ತೆಯ ಕಡೆಯಿಂದ ದೂರು ಸಲ್ಲಿಕೆಯಾಗಿದೆ. ಈ ದೂರನ್ನು ಆಧರಿಸಿ ಸುಳ್ಯ ಪೊಲೀಸರು ಆರೋಪಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.



