ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್: ವಿದ್ಯಾರ್ಥಿ ವೇತನ ಪ್ರಕಟಣೆ
ಪುತ್ತೂರು: ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ವತಿಯಿಂದ ಉನ್ನತ ವ್ಯಾಸಂಗಕ್ಕಾಗಿ ಮುಂದಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನ ಯೋಜನೆ ಶೀಘ್ರದಲ್ಲೇ ಆರಂಭವಾಗಲಿದ್ದು ಕಳೆದ ಶೈಕ್ಷಣಿಕ ವರ್ಷದಲ್ಲಿ 185 ವಿದ್ಯಾರ್ಥಿಗಳಿಗೆ ರೂ.27 ಲಕ್ಷ ವಿದ್ಯಾರ್ಥಿ ವೇತನ ವಿತರಿಸಲಾಗಿದೆ ಎಂದು ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್‌ನ ಅಧ್ಯಕ್ಷ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ.

ಕಳೆದ ಬಾರಿ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳೆಲ್ಲರೂ ಉತ್ತಮ ಶೈಕ್ಷಣಿಕ ಪ್ರಗತಿಯನ್ನು ತೋರಿದ್ದಾರೆ. ವಿಶೇಷವಾಗಿ, ಸಿಎ ವಿಭಾಗದಲ್ಲಿ ವಿದ್ಯಾರ್ಥಿ ವೇತನ ಪಡೆದ ಇಬ್ಬರು ವಿದ್ಯಾರ್ಥಿಗಳು ಫೌಂಡೇಶನ್ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ. ವಿದೇಶಗಳಲ್ಲಿ ಹಲವು ವಿದ್ಯಾರ್ಥಿಗಳು ಉನ್ನತ ಅಧ್ಯಯನ ನಡೆಸುತ್ತಿದ್ದಾರೆ. ವೈದ್ಯಕೀಯ ಕ್ಷೇತ್ರಕ್ಕೆ ಮಾತ್ರ ಪ್ರಾಶಸ್ತ್ಯ ನೀಡದೆ, ಎಲ್ಲಾ ಕ್ಷೇತ್ರಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ನಾವು ಸಮಾನ ಆದ್ಯತೆಯನ್ನು ನೀಡುತ್ತಿದ್ದೇವೆ ಎಂದು ಅವರು ತಿಳಿಸಿದರು.
ಕಳೆದ ವರ್ಷ ವಿದ್ಯಾರ್ಥಿ ವೇತನ ಪಡೆದಿದ್ದು ತಮ್ಮ ಪ್ರಗತಿ ವಿವರಗಳನ್ನು ಸಲ್ಲಿಸಿದವರಿಗೆ ಮುಂದುವರಿಸಲಾಗುತ್ತದೆ. ಹೊಸ ಅರ್ಜಿಗಳನ್ನು ಆಪ್ ಮೂಲಕ ಸ್ವೀಕರಿಸಲಾಗುತ್ತದೆ, ಇದರ ಲಿಂಕ್‌ನ್ನು ನಮ್ಮ ವಾಟ್ಸ್‌ಆಪ್ ಮತ್ತು ಇನ್‌ಸ್ಟಾಗ್ರಾಮ್ ಮೂಲಕ ಹಂಚಲಾಗುತ್ತದೆ. ಆಯ್ಕೆ ಪ್ರಕ್ರಿಯೆಯು ಕೌನ್ಸೆಲಿಂಗ್, ಪರೀಕ್ಷೆ ಹಾಗೂ ಆರ್ಥಿಕ ಹಿನ್ನಲೆ ಆಧಾರದ ಮೇಲೆ ನಡೆಯುತ್ತದೆ. ಅರ್ಹ ವಿದ್ಯಾರ್ಥಿಗಳಿಗೆ 100% ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ +91 9945359565(ವಾಟ್ಸಾಪ್ ಸಂದೇಶ ಮಾತ್ರ) ಸಂಪರ್ಕಿಸಬಹುದಾಗಿದೆ.



