ಕರಾವಳಿ

ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜು: ದಾಖಲಾತಿ ಆರಂಭ

ಪುತ್ತೂರು: ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಅಧೀನದ ಅಸ್ವಾಲಿಹಾ ವುಮೆನ್ಸ್ ಕಾಲೇಜಿನ 2026–27ನೇ ಸಾಲಿನ ದಾಖಲಾತಿಗೆ, ಸಂಸ್ಥೆಯ ಅಧ್ಯಕ್ಷರಾದ ಕೆ.ಪಿ. ಅಹ್ಮದ್ ಹಾಜಿ ಆಕರ್ಷಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಯ್ಯಿದ್ ಅಹ್ಮದ್ ಪೂಕೋಯ ತಂಙಳ್ ಹಾಗೂ ಮಹ್ಮೂದುಲ್ ಫೈಝಿ ಓಲೆಮುಂಡೋವು  ಅವರು ಚಾಲನೆ ನೀಡಿದರು.

ದಶಮಾನೋತ್ಸವ ಸಂಭ್ರಮದಲ್ಲಿರುವ ಅಸ್ವಾಲಿಹಾ ವುಮೆನ್ಸ್ ಕಾಲೇಜಿನ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಕಲಾ ಪ್ರತಿಭಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿ ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಪಿಯುಸಿ ಪರೀಕ್ಷೆಯಲ್ಲಿ ಸತತ ಏಳು ಬಾರಿ ಶೇ.100 ಫಲಿತಾಂಶ ದಾಖಲಿಸಿ “ಮೀಫ್ ಅವಾರ್ಡ್” ಗೆ ಪಾತ್ರವಾಗಿದೆ.
 ಇದಲ್ಲದೆ, ಕಳೆದ ಮೂರು ವರ್ಷಗಳಿಂದ ಅಸ್ವಾಲಿಹಾ ಕೋರ್ಸ್ ಜೊತೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ CSWCಯ ಮಾನ್ಯತೆಯೊಂದಿಗೆ ಎಸ್‌ಎಸ್‌ಎಲ್‌ಸಿ ನಂತರದ ಎರಡು ವರ್ಷದ ಫಾಳಿಲಾ ಕೋರ್ಸ್‌ನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ. ಈಗಾಗಲೇ ಅಸ್ವಾಲಿಹಾದ ಎಂಟು ಬ್ಯಾಚ್‌ಗಳು ಶರೀಅ ಪದವಿ ಶಿಕ್ಷಣ ಪೂರ್ಣಗೊಳಿಸಿದ್ದು, ಎರಡು ಬ್ಯಾಚ್‌ಗಳು ಫಾಳಿಲಾ ಶರೀಅ ಕೋರ್ಸ್ ಸಂಪೂರ್ಣಗೊಳಿಸಿವೆ.


ಸಂಸ್ಥೆಯಲ್ಲಿ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ಕಾಲೇಜು ಶುಲ್ಕದಲ್ಲಿ ವಿಶೇಷ ರಿಯಾಯಿತಿಯನ್ನು ನೀಡಲಾಗುತ್ತದೆ. ಮೊದಲಿಗೆ ದಾಖಲಾತಿ ಪಡೆಯುವ ವಿದ್ಯಾರ್ಥಿನಿಯರಿಗೆ ಈ ಸೌಲಭ್ಯದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ವಿದ್ಯಾರ್ಥಿನಿಯರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್ ಹಾಗೂ ಸಂಚಾಲಕ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!