ಇಸ್ರೇಲ್-ಲೆಬನಾನ್ ಕದನ ವಿರಾಮ:
ಟ್ರಂಪ್ ಘೋಷಣೆ
ವಾಶಿಂಗ್ಟನ್: ಇಸ್ರೇಲ್ ಮತ್ತು ಲೆಬನಾನ್ ಗಳು 10 ದಿನಗಳ ಕದನ ವಿರಾಮಕ್ಕೆ ಸಮ್ಮತಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ.

ಗುರುವಾರ ಎರಡೂ ದೇಶಗಳ ನಾಯಕರ ಜೊತೆ ಫೋನ್ನಲ್ಲಿ ಮಾತನಾಡಿದ್ದು ಕದನ ವಿರಾಮಕ್ಕೆ ಮತ್ತು ಶಾಂತಿ ಸ್ಥಾಪನೆಗೆ ಎರಡೂ ದೇಶಗಳು ಸಮ್ಮತಿಸಿವೆ. ಇದು ತನ್ನ ಮಧ್ಯಸ್ಥಿಕೆಯಲ್ಲಿ ಜಾರಿಗೆ ಬಂದ 10ನೇ ಕದನ ವಿರಾಮವಾಗಿದೆ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ.




