35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿಯೋರ್ವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಅಬ್ಬಾಸ್ ಜಿ. ಬಂಧಿತ ಆರೋಪಿ. ಇವರು ಎ.16ರಂದು ಅಬ್ಬಾಸ್ ವಿದೇಶದಿಂದ ಹಿಂತಿರುಗುವಾಗ ಇಮಿಗ್ರೇಶನ್ ವಿಭಾಗದ ಸಹಕಾರದಿಂದ, ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಯಾದ ಮೋಹನ ಮತ್ತು ವೆಂಕಪ್ಪ ದಸ್ತಗಿರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.




