ಕರಾವಳಿಕ್ರೈಂ

ಪುತ್ತೂರು: ಬೈಕ್ ಅಪಘಾತ, ಯುವಕ ಮೃತ್ಯು

ಪುತ್ತೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ
ಅಪಘಾತದಲ್ಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಎ.18ರಂದು ಮಧ್ಯಾಹ್ನ ಪುತ್ತೂರು- ಉಪ್ಪಿನಂಗಡಿ ರಸ್ತೆಯಲ್ಲಿನ ಪುತ್ತೂರು ಪಡೀಲ್ ಎಂಬಲ್ಲಿ ನಡೆದಿದೆ.

ಢಿಕ್ಕಿಯ ತೀವ್ರತೆಗೆ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಂದು ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತ ಬೈಕ್ ಸವಾರನನ್ನು ಧನುಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!