ರಾಜಕೀಯರಾಷ್ಟ್ರೀಯ

ರಾಘವ್‌ ಚಡ್ಡಾ ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆ

ನವದೆಹಲಿ: ರಾಘವ್‌ ಚಡ್ಡಾ ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದು ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದೆ.

ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್ ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ರಾಜ್ಯಸಭಾ ಸದಸ್ಯರ ಪೈಕಿ 2/3 ಸದಸ್ಯರು ಬೆಂಬಲ ನೀಡಿರುವುದಾಗಿ ಸುದ್ದಿಗೋಷ್ಠಿಯಲ್ಲಿ ರಾಘವ್‌ ಚಡ್ಡಾ ತಿಳಿಸಿದ್ದಾರೆ. ಬಿಜೆಪಿಗೆ ಬೆಂಬಲಿಸುವ ಬಗ್ಗೆ ಕೂಡ ಮಾಹಿತಿ ಹಂಚಿಕೊಂಡಿದ್ದಾರೆ.


ರಾಜ್ಯಸಭೆಯಲ್ಲಿ ಎಎಪಿಗೆ ಸೇರಿದ 2/3 ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಚಲಾಯಿಸಲು ಮತ್ತು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದೇವೆ. ನಾನು ನನ್ನ ರಕ್ತ ಮತ್ತು ಬೆವರಿನಿಂದ ಪೋಷಿಸಿ, ನನ್ನ ಯೌವನದ 15 ವರ್ಷಗಳನ್ನು ನೀಡಿದ ಎಎಪಿ ತನ್ನ ತತ್ವಗಳು, ಮೌಲ್ಯಗಳು ಮತ್ತು ಮೂಲ ನೈತಿಕತೆಗಳಿಂದ ವಿಮುಖವಾಗಿದೆ. ಈಗ ಈ ಪಕ್ಷವು ರಾಷ್ಟ್ರದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಅದರ ವೈಯಕ್ತಿಕ ಲಾಭಕ್ಕಾಗಿ ಕೆಲಸ ಮಾಡುತ್ತಿದೆ ಎಂದು ರಾಘವ್‌ ಚಡ್ಡಾ ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!