ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು
ಪುತ್ತೂರು: ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ.
ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15) ಮೃತಪಟ್ಟ ಬಾಲಕ.

ಶಹೀರ್, ಗಡಿಯಾರದಲ್ಲಿರುವ ತನ್ನ ಅಜ್ಜನ ಮನೆಯಲ್ಲಿ,
ಇಂದು ಬೆಳಿಗ್ಗೆ ಶಹೀರ್ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗುಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈತ ಪುತ್ತೂರು ಮೌಂಟೇನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದನು.
ಮೃತನು ತಂದೆ, ತಾಯಿ, ಒಬ್ಬ ಸಹೋದರ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾನೆ.



