7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪ್ರಕರಣವೊಂದರಲ್ಲಿ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಹಾರ ಬೇಗುಸಾರೈ ನಿವಾಸಿ ಟುಣ್ ಟುಣ್ ಕುಮಾರ್ (31) ಎಂಬಾತನನ್ನು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ HC 396 ಮಧು ಕೆ ಎನ್, PC 1968 ಅಸ್ತಮ್ ಆರ್, PC 2445 ನಾಗೇಶ ಕೆ ಸಿ ರವರುಗಳು ಬಿಹಾರದಲ್ಲಿ ದಸ್ತಗಿರಿ ಮಾಡಿ, ಎ.25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.




