ಕರಾವಳಿಕ್ರೈಂ

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು

ಬೆಳ್ತಂಗಡಿ: ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.



ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ -ರೇವತಿ ದಂಪತಿಯ ಪುತ್ರಿ ರಮಾ (19) ಮೃತಪಟ್ಟವರು. ಇವರು ಎ.19ರಂದು ರಾತ್ರಿ ಮನೆಯಲ್ಲಿ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

 



ರಮ ವಾಮದಪದವು ಕಾಲೇಜಿನ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎ.30ರಂದು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!