ಕರಾವಳಿ

ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಆಯ್ಕೆ






ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪುತ್ತೂರು ಇದರ ಕಿಸಾನ್ ಘಟಕದ ಅಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಅವರು ಆಯ್ಕೆಗೊಂಡಿದ್ದಾರೆ. ಶಾಸಕ ಅಶೋಕ್ ರೈ ಅವರ ಶಿಫಾರಸ್ಸಿನಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ ಅವರು ಈ ನೇಮಕ ಮಾಡಿದ್ದಾರೆ.



ಕಿಸಾನ್ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಅವರನ್ನು ಶಾಸಕ ಅಶೋಕ್ ರೈಯವರು ಶಾಲು ಹೊದಿಸಿ ಗೌರವಿಸಿ ಅಭಿನಂದಿಸಿದರು. ಉದ್ಯಮಿಯಾಗಿರುವ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಅವರು ಪ್ರಸ್ತುತ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಹಾಗೂ ಸುಳ್ಯ ಅಲ್ಪ ಸಂಖ್ಯಾತರ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿದ್ದಾರೆ. ಈ ಹಿಂದೆ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ, ಸುಳ್ಯ ತಾಲೂಕು ಘಟಕದ ಉಸ್ತುವಾರಿಯಾಗಿ, ಜಯಕರ್ನಾಟಕ ಈಶ್ವರಮಂಗಲ ವಲಯಾಧ್ಯಕ್ಷರಾಗಿ, 2 ಬಾರಿ ಈಶ್ವರಮಂಗಲ ಮುಹಿಯುದ್ದೀನ್ ಜುಮಾ ಮಸೀದಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ

 

Leave a Reply

Your email address will not be published. Required fields are marked *

error: Content is protected !!