ಸುಬ್ರಹ್ಮಣ್ಯ: ಕಾರಿನಲ್ಲಿ ದನ ಕಳವು; ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ಕೃತ್ಯ!
ಕಡಬ: ಸುಬ್ರಹ್ಮಣ್ಯ ಗ್ರಾಮದ ಜನನಿಬಿಡ ರಸ್ತೆಯಲ್ಲಿ ನಿಂತಿದ್ದ ದನವೊಂದನ್ನು ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ತುಂಬಿಸಿಕೊಂಡು ಕಳವು ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.
ಮೇ.6ರಂದು ಬೆಳಗಿನ ಜಾವ ಸುಮಾರು 2.30 ರಿಂದ 02.50ರ ಅವಧಿಯಲ್ಲಿ ಸುಬ್ರಹ್ಮಣ್ಯದ ಲಾಡ್ಜ್ ವೊಂದರ ಮುಂಭಾಗದ ರಸ್ತೆಯಲ್ಲಿ ಈ ಕೃತ್ಯ ನಡೆದಿದೆ. ಇಬ್ಬರು ವ್ಯಕ್ತಿಗಳು ರಸ್ತೆ ಬದಿಯಲ್ಲಿ ನಿಂತಿದ್ದ ದನವನ್ನು ಹಿಡಿದು, ಕಾರಿನೊಳಗೆ ಹಾಕಿಕೊಂಡು ಪರಾರಿಯಾಗಿದ್ದಾರೆ.
ದನವನ್ನು ಕಾರಿಗೆ ತುಂಬಿಸುವ ದೃಶ್ಯವು ಸಮೀಪದ ಅಂಗಡಿಯೊಂದರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಗಳು ಬಳಸಿದ ಕಾರು ಮತ್ತು ಅವರ ಚಲನವಲನಗಳ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಈ ಬಗ್ಗೆ ಶೇಖರ ಎ ಎಂಬವರು ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




